ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ಷಾ ಸಮಿತಿ ಸಭೆ

No comments

ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg) : ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಡಿಕೇರಿ ತಾಲೂಕು ಪಂಚಾಯತಿ ಅಧ್ಯಕ್ಷೆ ತೆಕ್ಕಡ ಶೋಭ ಮೋಹನ್ 10 ಲಕ್ಷ ರೂ ವೆಚ್ಚದಲ್ಲಿ ಎಕ್ಸರೇ ಯಂತ್ರ ಖರೀದಿಸಲಾಗಿದೆ. ಟೆಕ್ನಿಷಿಯನ್ ನೇಮಿಸಲು ಆರೋಗ್ಯಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದು  ಹೇಳಿದರು.
ಇದೀಗ ಆರೋಗ್ಯ ಕೇಂದ್ರದಲ್ಲಿ ದಂತ ವೈದ್ಯರು ಸೇರಿದಂತೆ ಮೂವರು ವೈದ್ಯರಿದ್ದು ಸಾರ್ವಜನಿಕರು ಸದುಪಯೋಗ  ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮುರಳಿ ಕರುಂಬಯ್ಯ ಮಾತನಾಡಿ ಜಿಲ್ಲಾ ಪಂಚಾಯಿತಿ ವತಿಯಿಂದ ವೆಚ್ಚದಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕ ಕಾಮಗಾರಿಗೆ ಈಗಾಗಲೇ ಹಣ ಬಿಡುಗಡೆಯಾಗಿದ್ದು 19ರ ಕಾರಣದಿಂದ ವಿಳಂಬವಾಗಿದೆ ಇದನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.

ಸಭೆಯಲ್ಲಿ ತುರ್ತು ಚಿಕಿತ್ಸಾ ವಾಹನ ಸಿಸಿ ಕ್ಯಾಮರಾ ದುರಸ್ತಿ ಮತ್ತಿತರ ಸಮಸ್ಯೆಗಳ ಬಗ್ಗೆ ಚರ್ಚೆ ಚರ್ಚಿಸಲಾಯಿತು.
ಈ ಸಂದರ್ಭ ತಾಲೂಕು ಪಂಚಾಯತಿ ಸದಸ್ಯೆ ಉಮಾ ಪ್ರಭು ,ರಕ್ಷಾ ಸಮಿತಿ ಸದಸ್ಯರಾದ ಮನ್ಸೂ ಅಲಿ, ಪಿ ಎಂ ರಶೀದ್,  ,ವೈದ್ಯಾಧಿಕಾರಿ ಡಾ, ಪೂವಯ್ಯ, ಡಾ ಮದನ್ ಮೋಹನ್ , ಡಾ ಕುಶಾಲ್,ಸಿಬ್ಬಂದಿಗಳು ಇದ್ದರು,
ಸಭೆಯಲ್ಲಿ ಕೊರೋನಾ ವಾರಿಯರ್ಸ್ ಆಗಿ  ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು ದಾದಿಯರು ಮತ್ತು ಆಶಾ ಕಾರ್ಯಕರ್ತರನ್ನು ಅಭಿನಂದಿಸಲಾಯಿತು.

No comments

Post a Comment