ಮಡಿಕೇರಿ Times Of Coorg:-ಕೊಡಗು ಜಿಲ್ಲಾಡಳಿತ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಕೋಟೆ ಆವರಣದಲ್ಲಿ ನಡೆಯಲಿದೆ.
ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರಾ, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ.
No comments
Post a Comment