ಕೊಡಗು ಜಿಲ್ಲೆಯಲ್ಲಿ ಇಂದು 3 ಮಂದಿಗೆ ಕೊರೋನಾ ಪಾಸಿಟಿವ್
ಮಡಿಕೇರಿ (Times Of Coorg) : ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ವೇಳೆಗೆ 3 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಕುಶಾಲನಗರ ಮುಳ್ಳುಸೋಗೆ ಶ್ರೀನಿಧಿ ಬಡಾವಣೆಯ 23 ವರ್ಷದ ಮಹಿಳೆ, ನಗರದ ಗಣಪತಿ ಬೀದಿ ಬದ್ರಿಯಾ ಮೀನು ಅಂಗಡಿ ಬಳಿಯ 53 ವರ್ಷದ ಪುರುಷ ಮತ್ತು ನಗರದ ವಾರ್ತಾ ಭವನ ಬಳಿಯ 80 ವರ್ಷದ ಪುರುಷರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 1220 ಆಗಿದ್ದು, 938 ಮಂದಿ ಗುಣಮುಖರಾಗಿದ್ದಾರೆ. 266 ಸಕ್ರಿಯ ಪ್ರಕರಣಗಳಿದ್ದು, 16 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ 260 ಕಂಟೈನ್‍ಮೆಂಟ್ ವಲಯ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment