ತಗ್ಗು ಪ್ರದೇಶ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆ : ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಮನವಿ

No comments

ಮಡಿಕೇರಿ (Times Of Coorg):-ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ ಮಳೆ ಪ್ರಮಾಣ 74 ಮಿ.ಮಿ. ಆಗಿದ್ದು, 104 ಗ್ರಾಮ ಪಂಚಾಯತ್ ಗಳ ಪೈಕಿ 15 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 100 ಮಿ.ಮಿ. ಗಿಂತಲೂ ಅಧಿಕ ಮಳೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾದ ಪ್ರದೇಶ ಬಲ್ಲಮಾವಟಿ ಗ್ರಾಮ ಪಂಚಾಯತ್ ವ್ಯಾಪ್ತಿ ಆಗಿದ್ದು 172 ಮಿ.ಮೀ. ಮಳೆಯಾಗಿದೆ. ಅಂತೆಯೇ ಭಾಗಮಂಡಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 170.5 ಮಿ.ಮಿ. ನಷ್ಟು ಮಳೆಯಾಗಿದೆ.

       ಜಿಲ್ಲೆಯಲ್ಲಿ ಆಗಸ್ಟ್ 7 ರ ವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಹೆಚ್ಚಿನ ಮಳೆಯಾಗುತ್ತಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವಾಗುವ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದ್ದು, ಇಂತಹ ಪ್ರದೇಶದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ. ಮಾಹಿತಿಗೆ ಜಿಲ್ಲಾಡಳಿತ ಕಂಟ್ರೋಲ್ ರೂಂ. 1077 ಅಥವಾ ವಾಟ್ಸಪ್ 8550001077 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.

No comments

Post a Comment