ವರದಿ : ಎಂ .ಆರ್ ಸಲೀಂ ಸಿದ್ದಾಪುರ
ಸಿದ್ದಾಪುರ (Times Of Coorg) :ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಕಾವೇರಿ ನದಿ ಪ್ರವಾಹದಿಂದ ಸಂಕಷ್ಟಕ್ಕೊಳಗಾಗಿರುವ ಸಂತ್ರಸ್ತರು ಹಾಗೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಕಾಂಗ್ರೆಸ್ ಐ ಎನ್ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ನಾಪಂಡ ಮುತ್ತಪ್ಪ ಭೇಟಿ ನೀಡಿದರು.
ನೆಲ್ಲಿಹುದಿಕೇರಿ ಕಾವೇರಿ ನದಿ ದಡ ಪ್ರದೇಶಗಳಾದ ಬೆಟ್ಟದಕಾಡು, ಬರಡಿ, ಕುಂಬಾರಗುಂಡಿ ಪ್ರವಾಹ ಪೀಡಿತ ಸ್ಥಳಕ್ಕೆ ಬೋಟ್ ಮೂಲಕ ತೆರಳಿ ಪ್ರವಾಹದಿಂದ ಮನೆಗಳು ನೀರಿನಲ್ಲಿ ಮುಳುಗಿರುವುದನ್ನು ಪರಿಶೀಲನೆ ನಡೆಸಿದರು.
ನಂತರ ಖಾಸಗಿ ಕಟ್ಟಡವೊಂದರಲ್ಲಿರುವ ಸಂತ್ರಸ್ತರ ಪರಿಹಾರ ಕೇಂದ್ರಕ್ಕೆಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು .ನಂತರ ಪತ್ರಿಕೆಯೊಂದಿಗೆ ಮಾತನಾಡಿ ಹಲವು ವರ್ಷಗಳಿಂದಲೂ ನದಿ ದಡದಲ್ಲಿ ಸಂಕಷ್ಟದ ಜೀವನ ನಡೆಸುತ್ತಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಳಂಬ ಮಾಡುತ್ತಿರುವುದು ಸರಿಯಲ್ಲ.ಪರಿಹಾರ ನೀಡುವಲ್ಲಿ ತಾರತಮ್ಯ ಮಾಡುತ್ತಿದ್ದು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸಬೇಕಿದೆ ಎಂದರು.
ನಂತರ ಕರಡಿಗೋಡು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕರಡಿಗೊಡು ಗ್ರಾಮದಲ್ಲಿರುವ ಎರಡು ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದರು.ಕಳೆದ ಎರಡು ವರ್ಷಗಳಿಂದಲೂ ಪ್ರವಾಹ ಸಂದರ್ಭದಲ್ಲಿ ಮನೆ ಆಸ್ತಿ ಪಾಸ್ತಿ ಕಳೆದುಕೊಂಡು ಸಂಕಷ್ಟದಲ್ಲಿದ್ದೇವೆ .ಶಾಶ್ವತ ಸೂರು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ .ನದಿ ದಡ ಬಿಟ್ಟು ತೆರಳಲು ಎರಡು ವರ್ಷಗಳ ಹಿಂದೆ ಜಿಲ್ಲಾಡಳಿತಕ್ಕೆ ಮನವಿ ನೀಡಲಾಗಿದ್ದರೂ ಇದುವರೆಗೂ ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಲ್ಲ ಎಂದು ದೂರಿದರು .
.ಈ ಸಂದರ್ಭ ನಾಪಂಡ ಮುತ್ತಪ್ಪ ಮಾತನಾಡಿ ಹಲವು ವರ್ಷಗಳಿಂದ ನದಿ ದಡದಲ್ಲಿರುವ ಬಡ ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸುವಲ್ಲಿ ಸರಕಾರ ಹಾಗೂ ಜನಪ್ರತಿನಿಧಿಗಳು ವಿಫಲವಾಗಿದೆ. ಈ ಭಾಗದ ಜನಪ್ರತಿನಿಧಿಗಳು ಸಂತ್ರಸ್ತರನ್ನು ಕಡೆಗಣಿಸಿದ್ದಾರೆ.ಕರಡಿಗೋಡು ಬಾರದ ನೂರು ಕಿಚ್ಚು ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ .ಈ ಸಂದರ್ಭ ನೆಲ್ಯಹುದಿಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಸಾಬು ವರ್ಗಿಸ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಕೆ.ಎಂ ಸಯ್ಯದ್ ಭಾವ ಸೇರಿದಂತೆ ಮತ್ತಿತರರು ಇದ್ದರು.
No comments
Post a Comment