ಕೊಡಗು ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ ಎಚ್ಚರಿಕೆ

No comments

     ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗುತ್ತಿದೆ. ಮುಂದುವರೆದು ಜಿಲ್ಲೆಗೆ ಆಗಸ್ಟ್ 07 ರಿಂದ ಆಗಸ್ಟ್ 08  ರ ಬೆಳಗ್ಗೆ 8.30 ರವರೆಗೆ ರೆಡ್ ಅಲರ್ಟ್, ಆಗಸ್ಟ್ 08 ರ ಬೆಳಿಗ್ಗೆಯಿಂದ ಆಗಸ್ಟ್ 11 ರ ಬೆಳಿಗ್ಗೆವರೆಗೆ ಆರೆಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

      ಮುಂದಿನ ದಿನಗಳಲ್ಲಿ ಮುಂಗಾರು ಮಳೆಯ ಹೆಚ್ಚಾಗುವ ಸಂಭವ ಇದ್ದು, ಈ ಕಚೇರಿಯಿಂದ ಆಗಾಗ್ಗೆ ಹೊರಡಿಸುವ ಹವಾಮಾನ ಮುನ್ಸೂಚನೆಗಳನ್ನು ಗಮನಿಸಲು ಕೋರಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ 08272-221077 ವಾಟ್ಸ್‍ಪ್ ಸಂಖ್ಯೆ  8550001077 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment