ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ : ಹಲವೆಡೆ ಧರೆಗುರುಳಿದ ಮರಗಳು

No comments

ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಗಾಳಿಯಿಂದಾಗಿ ಹಲವೆಡೆ ಮರಗಳು ಧರೆಗುರುಳಿವೆ. ಮಡಿಕೇರಿ ವಿರಾಜಪೇಟೆ ರಸ್ತೆಯ ಬೇತ್ರಿ ಸಮೀಪ ಮರ ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಸೋಮವಾರಪೇಟೆ - ಕುಶಾಲನಗರ ಹೆದ್ದಾರಿಯ ಮೂರುಕಡೆ ಮರ ಅಡ್ಡಲಾಗಿ ಉರುಳಿತ್ತು. ಇನ್ನೂ ಹಲವೆಡೆ ಮನೆ ಮೇಲೆ ಮರ ಬಿದ್ದಿದು, ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಶಿವರಾಮ ಬಡಾವಣೆಯ ರಾಸಯ್ಯ ಎಂಬ ವರ ಮನೆ ಮೇಲೆ ಭಾರೀ ಗಾತ್ರದ ಮರ ಬಿದ್ದಿದೆ. ವಿರಾಜಪೇಟೆ ತಾಲ್ಲೂಕಿನ ಬಿ.ಶೆಟ್ಟಿಗೇರಿಯಲ್ಲಿ ಮನೆಯ ಮೇಲೆ ಮರವೊಂದು ಉರುಳಿ ಬಿದ್ದಿದೆ. ನಷ್ಟವೂ ಉಂಟಾಗಿದೆ. ಮಳೆಯ ಆರ್ಭಟದೊಂದಿಗೆ ಕಾವೇರಿ ನದಿಯು ಉಕ್ಕಿ ಹರಿಯುತ್ತೀದ್ದು, ಚೆರಿಯಪರಂಬು- ಕಲ್ಲುಮೊಟ್ಟೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಮೂರ್ನಾಡು - ನಾಪೋಕ್ಲು ಮುಖ್ಯರಸ್ತೆಯ ಮೇಲೆ ನದಿ ನೀರು ಹರಿಯುತ್ತಿದೆ. ಮಡಿಕೇರಿ ಸಮೀಪ ಮೇಕೆರಿಯ ಒಂದನೇ ಮೈಲಿನ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ. ಮಡಿಕೇರಿ ನಗರದ ಓಂಕಾರೇಶ್ವರ ದೇವಸ್ಥಾನ ರಸ್ತೆಯಲ್ಲಿ ಅಲ್ಪ ಪ್ರಮಾಣದ ಭೂ ಕುಸಿತ ಉಂಟಾಗಿ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಮಡಿಕೇರಿ ತಾಲ್ಲೂಕು ಕಡಗದಾಳು-ಚೆಟ್ಟಳ್ಳಿ ರಸ್ತೆಯಲ್ಲಿ ಮರ ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆ ಆಗಿತ್ತು.








> DISTRICT ADMINSTRATION
ಮೇಲಿನ ಎಲ್ಲಾ ಪ್ರಕರಣಗಳಲ್ಲಿ ಜಿಲ್ಲಾಡಳಿತದ ಪ್ರಕೃತಿ ವಿಕೋಪ ಪರಿಹಾರ ತಂಡಗಳು ತಕ್ಷಣ ಕಾರ್ಯೋನ್ಮುಖರಾಗಿ ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.   

ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಉಂಟಾಗುವ ಅನಾನುಕೂಲಗಳನ್ನು ಎದುರಿಸಲು ಜಿಲ್ಲಾಡಳಿತವು ಸಜ್ಜಾಗಿದ್ದು, ಜಿಲ್ಲೆಯ ಜನತೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಆದಾಗ್ಯೂ ಗುಡ್ಡಗಾಡು ಮತ್ತು ಬೆಟ್ಟದ ತಪ್ಪಲಿನಲ್ಲಿ ವಾಸಿಸುವ ಜನರು ಸ್ವಲ್ಪ ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಮನವಿ ಮಾಡುತ್ತದೆ.   ಯಾವುದೇ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ನಿಯಂತ್ರಣ ಕೊಠಡಿ ಸಂ:221077 ಮತ್ತು ವಾಟ್ಸಪ್ ಸಂ:8550001077 ನ್ನು ಸಂಪರ್ಕಿಸಲು ಕೋರಲಾಗಿದೆ. 

(ಮಾಹಿತಿ -ಜಿಲ್ಲಾಧಿಕಾರಿ, 

ಕೊಡಗು ಜಿಲ್ಲೆ, ಮಡಿಕೇರಿ.

No comments

Post a Comment