ಭಾರತದ ಪ್ರಜಾಪ್ರಭುತ್ವ ಬುಡಮೇಲುಗೊಳಿಸಲು ಫೇಸ್ಬುಕ್ ವಾಟ್ಸಪ್ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ : ಕಾಂಗ್ರೆಸ್

No comments


ಟೈಮ್ಸ್ ಆಫ್ ಕೂರ್ಗ್ (ರಾಷ್ಟ್ರಿಯ ಸುದ್ದಿ) : ಭಾರತದ ಪ್ರಜಾಪ್ರಭುತ್ವವನ್ನು ಬುಡಮೇಲುಗೊಳಿಸಲು ಪ್ರಖ್ಯಾತ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ವಾಟ್ಸಪ್ ಆಡಳಿತರೂಢ ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಭಾರತದಲ್ಲಿ ಫೇಸ್ ಬುಕ್ ಮತ್ತು ವಾಟ್ಸಪ್ ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅಮೇರಿಕದ " ದಿ ವಾಲ್ ಸ್ಟ್ರೀಟ್ ಜರ್ನಲ್ " ಎರಡನೇ ಭಾರಿ ಸುದ್ದಿಯೊಂದನ್ನು ಪ್ರಕಟಿಸಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷವು ಕಂಪೆನಿಗಳ ವಿರುದ್ಧ ಭಾರಿ ವಾಗ್ದಾಳಿ ನಡೆಸಿದೆ, ಈ ಸಂಬಂಧ ತಕ್ಷಣ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಆದೇಶಿಸಬೇಕು ಮತ್ತು ಫೇಸ್ಬುಕ್ ವಾಟ್ಸಪ್ ಕಂಪೆನಿಗಳ ಪರವಾನಗಿಗಳನ್ನು ತಡೆಹಿಡಯಬೇಕು ಎಂದು ಕಾಂಗ್ರೆಸ್ ಪಕ್ಷ ಒತ್ತಾಯಿಸಿದೆ.

ಈ ಎರಡು ವಾರಗಳಲ್ಲಿ ಪ್ರಖ್ಯಾತ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ಪ್ರಕಟಗೊಂಡ ಲೇಖನಗಳು ಬಿಜೆಪಿಯೊಂದಿಗಿನ ವಾಟ್‌ಸಪ್ ಮತ್ತು ಫೇಸ್ಬುಕ್ ಸಂಬಂಧವಿರುದನ್ನು ಬಹಿರಂಗಪಡಿಸಿದೆ. ಈ ಮೂಲಕ ದೇಶದ ಪ್ರಜಾಪ್ರಭುತ್ವವನ್ನು ಹಾಳು ಮಾಡುವ ಮತ್ತು ದೇಶದ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ತರುವುದು ಇವರ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದರು.

No comments

Post a Comment