ಕೆಪಿಸಿಸಿ ಸಂಯೋಜಕರಾಗಿ ಮಡಿಕೇರಿ ನಗರಸಭೆಯ ಮಾಜಿ ಅಧ್ಯಕ್ಷ ಹೆಚ್ ಎಂ ನಂದಕುಮಾರ್ ನೇಮಕ

No comments


ಮಡಿಕೇರಿ (Times Of Coorg) :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರನ್ನಾಗಿ ಮಡಿಕೇರಿ ನಗರ ಸಭೆಯ ಮಾಜಿ ಅಧ್ಯಕ್ಷರು ಹಾಗು ಕೊಡಗು ಜಿಲ್ಲಾ ಕಾಂಗ್ರೆಸ್ ಖಜಾಂಚಿ ಗಳಾದ ಹೆಚ್ ಎಂ ನಂದಕುಮಾರ್ ರವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರು ಆದೇಶ ಹೊರಡಿಸಿದ್ದಾರೆ.
 ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಡಬ ಬ್ಲಾಕ್ ಉಸ್ತುವಾರಿ ಯನ್ನು ನಂದಕುಮಾರ್ ರವರಿಗೆ ವಹಿಸಲಾಗಿದೆ.

ಹೆಚ್ ಎಂ ನಂದಕುಮಾರ್ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿರಿಯ ನಾಯಕರಾಗಿದ್ದು ನಾಲ್ಕುಬಾರಿ  ಮಡಿಕೇರಿ ನಗರಸಭೆಯ ಸದಸ್ಯರಾಗಿ ,ನಗರಸಭಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜ ಸೇವೆ ಸಲ್ಲಿಸುವ ಮೂಲಕ ಅನೇಕ ಅಭಿಮಾನಿಗಳನ್ನು ಹೊಂದಿದ್ದಾರೆ.,2018 ಮತ್ತು 2019 ರಲ್ಲಿ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಸಂಭವಿಸಿದ್ದಾಗ ಸಂತಸ್ತರಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದರು.

ಕೋವಿಡ್ 19  ಲಾಕ್ ಡೌನ್ ಅವಧಿಯಲ್ಲಿ ಮಡಿಕೇರಿ ನಗರದ ಸಾವಿರಾರು ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಜನವಲಯದಲ್ಲಿ ಅಪಾರ ಮೆಚ್ಚುಗೆಗೆ ಭಾಜನರಾಗಿದ್ದರು.
ಹೆಚ್ ಎಂ ನಂದಕುಮಾರ್ ಪಕ್ಷದ ರಾಜ್ಯ ಪದಾಧಿಕಾರಿಗಳಾಗಿ, ನೇಮಕಗೊಂಡಿರುವುದಕ್ಕೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ,ಅವರ ಅಭಿಮಾನಿಗಳು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

No comments

Post a Comment