*ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಸಂಘ ಎಂದಿನಂತೆ ಮುಂದುವರಿಯಲಿದೆ : ನವೀದ್ ಖಾನ್ *

No comments
ಮಡಿಕೇರಿ  :ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್  ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು. ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್  ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕೊಡಗು ಜಿಲ್ಲೆಯಲ್ಲಿ  ಎಂ.ಎಸ್.ಅಂಗಡಿ ನೇತೃತ್ವದ  ಡಿ.ಕೆ.ಶಿವಕುಮಾರ್ ಆಭಿಮಾನಿಗಳ ಸಂಘವು  ಕಾರ್ಯಚರಿಸುತ್ತಿದ್ದುಇದರಿಂದ ಆಭಿಮಾನಿ ಸಂಘದ ಸದಸ್ಯರುಗಳು ಯಾವುದೇ ಗೊಂದಲ ಹಾಗೂ ಅಪಪ್ರಚಾರಗಳಿಗೆ ಕಿವಿಕೊಡದೆ ಸಮಾಜಿಕ ಚಟುವಟಿಕೆ ಗಳಿಗೆ ನಮ್ಮ ಸಂಘದೊಂದಿಗೆ ಎಂದಿನಂತೆ   ಬೆಂಬಲವಾಗಿರಬೇಕೆಂದು ಅಖಿಲ  ಕರ್ನಾಟಕ ಡಿ.ಕೆ.ಶಿವಕುಮಾರ್ ಆಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ  ನವೀದ್ ಖಾನ್ ( ಟೈಮ್ಸ್ ಆಫ್ ಕೊರ್ಗ್ ಗೆ)  ತಿಳಿಸಿದ್ದಾರೆ.

No comments

Post a Comment