ರಸ್ತೆ ಕಾಮಗಾರಿ : ಮಡಿಕೇರಿಯಿಂದ ಮೇಕೇರಿ ವರೆಗಿನ ವಾಹನ ಸಂಚಾರ ನಿಷೇಧ

No comments

ಮಡಿಕೇರಿ (Times Of Coorg):-ವಿರಾಜಪೇಟೆ -ಬೈಂದೂರು ರಸ್ತೆಯ 27.00 ರಿಂದ 31.00 ಕಿ.ಮೀ.ರವರೆಗೆ ಆಯ್ದ ಭಾಗಗಳಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕಾಂಕ್ರೀಟಿಕರಣ ಕಾಮಗಾರಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಪ್ರಯಾಣಿಕರ ಮತ್ತು ಸಾರ್ವಜನಿಕರ ಸಂಚಾರದ ಹಿತದೃಷ್ಟಿಯಿಂದ ಸಿ.ಆರ್.ಪಿ.ಸಿ. ಕಾಯ್ದೆ ಸೆಕ್ಸನ್ 144, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರ ಕಲಂ 33, 34(ಬಿ),(ಸಿ),(ಡಿ) ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5) ರಲ್ಲಿ ದತ್ತವಾದ ಅಧಿಕಾರದಂತೆ ಮಡಿಕೇರಿಯಿಂದ ಮೇಕೇರಿ ವರೆಗಿನ ರಸ್ತೆಯಲ್ಲಿ ಆಗಸ್ಟ್, 30 ರಿಂದ ಅಕ್ಟೋಬರ್, 30 ರವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಬದಲಿ ರಸ್ತೆಯಾದ ಮಡಿಕೇರಿ-ತಾಳತ್ತಮನೆ-ಮೇಕೇರಿ ಮಾರ್ಗವನ್ನು ಬಳಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2) ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಕಾರ್ಯಪಾಲಕ ಎಂಜಿನಿಯರ್, ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ, ಕೊಡಗು ವಿಭಾಗ, ಮಡಿಕೇರಿ ಇವರಿಗೆ ಸೂಚನೆ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment