ಪೋಲಿಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ : ಕೊಡಗು ಜಿಲ್ಲೆಯ 2756 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರು

No comments

ಮಡಿಕೇರಿ (Times Of Coorg) : ಕೊಡಗು ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದಿನಾಂಕ 20/09/2020ರಂದು ಜಿಲ್ಲೆಯ ಮಡಿಕೇರಿಯ 8 ಮತ್ತು ಕುಶಾಲನಗರದ 4 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಯಿತು. ಜಿಲ್ಲೆಯಲ್ಲಿನ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಾಗಿ ಒಟ್ಟು 2756 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಹಾಜರಾಗಿರುತ್ತಾರೆ ಎಂದು ಕೊಡಗು ಪೋಲಿಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ತಿಳಿಸಿದ್ದಾರೆ.

No comments

Post a Comment