ಕೊಡಗು: ಕೊರೊನಾ ಸೋಂಕಿಗೆ ಮತ್ತೊಂದು ಬಲಿ:ಮೃತರ ಸಂಖ್ಯೆ 30ಕ್ಕೆ ಏರಿಕೆ
ಮಡಿಕೇರಿ (Times Of Coorg) :ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ
ಸೋಮವಾರಪೇಟೆ ತಾಲ್ಲೂಕು ಯಡವನಾಡು ಗ್ರಾಮದ ನಿವಾಸಿ, ಅಧಿಕ ರಕ್ತದೊತ್ತಡ ಕಾಯಿಲೆಯಿಂದ ಬಳಲುತ್ತಿದ್ದ 96 ವರ್ಷದ ಮಹಿಳೆಯೊಬ್ಬರು ದಿನಾಂಕ:14-09-2020 ರಂದು ಕಫ ಸಂಬಂಧಿತ ಸಮಸ್ಯೆಯ ಕಾರಣ ಚಿಕಿತ್ಸೆಗಾಗಿ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ದಾಖಲಾಗಿದ್ದರು. ಅವರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿ, ಕೋವಿಡ್ ಸೋಂಕು ದೃಢಪಟ್ಟಿದ್ದು, ದಿನಾಂಕ:16-09-2020 ರಂದು ಮೃತ ಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

No comments
Post a Comment