ಕೊಡಗು ಜಿಲ್ಲೆಯಲ್ಲಿ ಭಾನುವಾರ ಹೊಸದಾಗಿ 37 ಮಂದಿಯಲ್ಲಿ ಕೊರೊನಾ ಪಾಸಿಟಿವ್: ಒಂದು ಸಾವು

No comments

ಮಡಿಕೇರಿ (Times Of Coorg): ಜಿಲ್ಲೆಯಲ್ಲಿ ರವಿವಾರ ಹೊಸದಾಗಿ 37 ಮಂದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ಧೃಡಪಟ್ಟಿದೆ.ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1994ಕ್ಕೆ ಏರಿಕೆಯಾಗಿದೆ.
ಇದುವರೆಗೆ 1605 ಮಂದಿ ಬಿಡುಗಡೆಯಾಗಿದ್ದು,363 ಪ್ರಕರಣಗಳು ಸಕ್ರಿಯವಾಗಿದೆ. ಸೋಂಕಿನಿಂದ 27 ಮಂದಿ ಮೃತಪಟ್ಟಿದ್ದಾರೆ.347 ನಿಯಂತ್ರಿತ ಪ್ರದೇಶಗಳನ್ನು ತೆರಯಲಾಗಿದೆ.

ಕೊರೊನಾ ಸೋಂಕಿಗೆ 61 ವರ್ಷದ ಪುರುಷ ಬಲಿ:

 ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಭಾನುವಾರ  ಮತ್ತೊಂದು ಸಾವು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಯಾಗಿದೆ.

ವಿರಾಜಪೇಟೆ ತಾಲ್ಲೂಕು ಕೊಂಡಂಗೇರಿ ಗ್ರಾಮದ ನಿವಾಸಿ (61) ವರ್ಷದ ಪುರುಷರೊಬ್ಬರು, ಈ ಹಿಂದಿನಿಂದಲೂ ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆ ಇವರಿಗೆ ಜ್ವರ ಮತ್ತು ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ.

ಈ ಬಗ್ಗೆ ಅವರು ಮೂರ್ನಾಡುವಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಭಾನುವಾರ   ಬೆಳಗ್ಗಿನ ಜಾವ 5.30 ಗಂಟೆಗೆ ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ಕರೆ ತಂದಿದ್ದು, ತಕ್ಷಣವೇ ಅವರನ್ನು ಸಮಗ್ರ ಪರಿಶೀಲನೆಗೆ ಒಳಪಡಿಸಿದ್ದು, ಮೃತರಾಗಿರುವುದು ದೃಢಪಟ್ಟಿತ್ತು.

ರಾಪಿಡ್ ಆಂಟಿಜೆನ್ ಕಿಟ್ ಮೂಲಕ ಕೋವಿಡ್ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿರುತ್ತದೆ.

ಮೃತ ದೇಹದ ಅಂತ್ಯಕ್ರಿಯೆಯನ್ನು ಸರ್ಕಾರದ ಕೋವಿಡ್ ಮಾರ್ಗಸೂಚಿಯಂತೆ  ನಡೆಸಲಾಗುವುದೆಂದು ಜಿಲ್ಲಾಧಿಕಾರಿ ಅನ್ನೀಸ್ ಕಣ್ಮಣಿ‌ ಜಾಯ್ ತಿಳಿಸಿದ್ದಾರೆ.

No comments

Post a Comment