ಭಾರಿ ಮಳೆ - ಮನೆಗಳಿಗೆ ನುಗ್ಗಿದ ನೀರು

No comments
ಸೋಮವಾರಪೇಟೆ Times Of Coorg:-ನಗರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ಹಲವು ಬಡಾವಣೆಗಳಿಗೆ ನೀರು ನುಗ್ಗಿದ್ದು.ಇನ್ನು ಕೆಲವೆಡೆ ರಸ್ತೆಗಳಲ್ಲಿ ಚರಂಡಿ ಇಲ್ಲದೆ ನೀರು ರಸ್ತೆಯ ಮೇಲೆ ಹರಿದು ಹಲವು ಮನೆಗಳಿಗೆ ನೀರು ನುಗಿದೆ.
ನಗರದ ಸಮೀಪದ ಆಲೆಕಟ್ಟೆ ರಸ್ತೆಯಲ್ಲಿರುವ  ಚೌಡ್ಲು ವ್ಯವಸಾಯ ಬ್ಯಾಂಕ್  ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ರಸ್ತೆ ಪಕ್ಕದ ಚರಂಡಿಯನ್ನು ಮುಚ್ಚಲ್ಪಟ್ಟಿದ್ದು ಇದರಿಂದ ಮಳೆ ನೀರು ರಸ್ತೆಯಲ್ಲಿಯೇ ಹರಿದು ತಗ್ಗುಪ್ರದೇಶದಲ್ಲಿರುವ ಹಲವು ಮನೆಗಳಿಗೆ ನೀರು ನುಗ್ಗಿದೆ.
ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಚೌಡ್ಲು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳಿಗೆ ಈ ಸಮಸ್ಯೆಗಳ ಬಗ್ಗೆ ಮನವಿ ಮಾಡಿದರೆ ಇದು ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದ್ದು ಅವರೇ ಈ ಚರಂಡಿ ನಿರ್ಮಿಸುವ ಕೆಲಸ ಮಾಡಬೇಕೆಂದು ಹೇಳುತ್ತಿದ್ದಾರೆ ಎಂದು ಗ್ರಾಮಸ್ಥರು ದುರುತಿದ್ದು
ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟವರು ಚರಂಡಿ ನಿರ್ಮಿಸಿ ಸಮಸ್ಯೆ ಬಗೆಹರಿಸಬೇಕೆಂದು ಸ್ಥಳೀಯ ಗ್ರಾಮಸ್ಥರು ಆಗ್ರಹಿಸಿದ್ದಾರೆ.

No comments

Post a Comment