ನಾಪೋಕ್ಲು ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ಕಟ್ಟಿಸಿ ಉಚಿತ ಮಾಸ್ಕ್ ವಿತರಣೆ
ವರದಿ : ಹಾರಿಸ್ ನಾಪೋಕ್ಲು
ನಾಪೋಕ್ಲು (Times Of Coorg) : ನಾಪೋಕ್ಲುವ್ಯಾಪ್ತಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನಾಪೋಕ್ಲು ವ್ಯಾಪ್ತಿಯಲ್ಲಿ ಸಾರ್ವಜನಿಕರು ಸರ್ಕಾರದ ನಿಯಮ ಪಾಲಿಸುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಗ್ರಾಮ ಪಂಚಾಯಿತಿ. ಇದರ ಸಂಬಂಧ ಶನಿವಾರ ನಾಪೋಕ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕರೆದಿದ್ದ ಸಭೆಯಲ್ಲಿ ತೀರ್ಮಾನಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಲುವಾಗಿ ಈ ದಿನ ನಾಪೋಕ್ಲು ಪಟ್ಟಣದಾದ್ಯಂತ ಕೊರೋನಾ ಟಾಸ್ಕ್ ಫೋರ್ಸ್ ಸಮಿತಿ ವತಿಯಿಂದ ಮಾಸ್ಕ್ ಸರಿಯಾಗಿ ಧರಿಸುವಂತೆ ಜಾಗೃತಿ ಮೂಡಿಸುತ್ತಾ ಮಾಸ್ಕ್ ಧರಿಸಿದವರಿಗೆ ದಂಡ ವಿಧಿಸಿ ಉಚಿತವಾಗಿ ಮಾಸ್ಕ್ ವಿತರಣೆ ಕೂಡ ಮಾಡಲಾಯಿತು.
ಮತ್ತೊಂದು ಕಡೆ ಪೊಲೀಸ್ ಇಲಾಖೆ ವತಿಯಿಂದಲೂ ದಂಡ ವಿಧಿಸಲಾಗುತ್ತಿತ್ತು.
ಈ ಈ ಕಾರ್ಯಾಚರಣೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರಾದ ಆಶಾಲತಾ ,ಅಜಿತ, ಶರ್ಲಿ, ಮತ್ತಿತರರು ಇದ್ದರು. ಮತ್ತೊಂದು ಕಡೆ ವಾಹನದಲ್ಲಿ ಧ್ವನಿವರ್ಧಕದ ಮೂಲಕ ನಾಪೋಕ್ಲು ಪಂಚಾಯಿತಿ ವ್ಯಾಪ್ತಿಯಲ್ಲಿ ಮುನ್ನೆಚ್ಚರಿಕೆಯಾಗಿ ಕೊರೋನಾ ಮಹಾಮಾರಿ ತಡೆಗಟ್ಟಲು ಅನಗತ್ಯವಾಗಿ ಮನೆಯಿಂದ ಹೊರಬರದಂತೆ ಸರಕಾರದ ಮಾರ್ಗಸೂಚಿ ಪಾಲಿಸಿ ಎಂದು ಜಾಗೃತಿ ಮೂಡಿಸಲಾಗುತ್ತಿದೆ.
ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ವಿಧಿಸಿ ಉಚಿತವಾಗಿ ಮಾಸ್ಕ್ ವಿತರಣೆ ಮಾಡುತ್ತಿರುವ ಪಂಚಾಯಿತಿ ಕ್ರಮವನ್ನು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದರು.


No comments
Post a Comment