ಪಾಲಿಬೆಟ್ಟ (Times Of Coorg): ಪಾಲಿಬೆಟ್ಟ ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಹಾಗೂ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಜನರು ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದು. ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಪಾಲಿಬೆಟ್ಟ ಬೆಳೆಗಾರರ ಒಕ್ಕೂಟದ ವತಿಯಿಂದ ಅನುಗ್ರಹ ಸಭಾಂಗಣದಲ್ಲಿ ನಡೆಯಿತು.
ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಡಾ/ಎ.ಸಿ ಗಣಪತಿ ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ ಹಲವು ವರ್ಷಗಳಿಂದ ಪಾಲಿಬೆಟ್ಟ ಸುತ್ತಮುತ್ತಲ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣು ಮುಚ್ಚಾಲೆ ಆಟ ಆಡುತ್ತಿದ್ದು ಇದರಿಂದ ಶಾಲಾ ವಿದ್ಯಾರ್ಥಿಗಳು ಸಾರ್ವಜನಿಕರು ಬೆಳೆಗಾರರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ.
ಗೋಣಿಕೊಪ್ಪಲಿನಿಂದ ಎಕ್ಸ್‌ಪ್ರೆಸ್ ಲೈನ್ ಮಾರ್ಗ ಹಾಗೂ ಸಭ್ ಸ್ಟೇಷನ್ ನಿರ್ಮಾಣ ಮಾಡಬೇಕೆಂದು ಹಲವು ಬಾರಿ ಮನವಿ ನೀಡಲಾಗಿದೆಕೂಡಲೇ ಸಮಸ್ಯೆ ಬಗೆಹರಿಸಬೇಕು ಹಾಗೂ ಪಾಲಿಬೆಟ್ಟ ಸುತ್ತಮುತ್ತಲ ವ್ಯಾಪ್ತಿಗೆ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ .
ಆನ್ಲೈನ್ ಶಿಕ್ಷಣ ಸೇರಿದಂತೆ ರೈತರಿಗೆ ಬೆಳೆಗಾರರಿಗೆ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ನೆಟ್ವರ್ಕ್ ಸಮಸ್ಯೆ ಬಗೆಹರಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದು ಕೂಡಲೇ ಸರಿಪಡಿಸಬೇಕೆಂದರು.
ವಕೀಲ ಹೇಮಚಂದ್ರ ಮಾತನಾಡಿ ಚೆಸ್ಕಾಂ ಇಲಾಖೆ ವಿದ್ಯುತ್ ಸರಿಯಾಗಿ ನೀಡದೆ ಬಿಲ್ ಹೆಚ್ಚು ವಸೂಲಾತಿ ಮಾಡುತ್ತಿದೆ. ಹಲವೆಡೆ ಎರಡು ಬಲ್ಬ್ ಬಳಕೆ ಮಾಡುತ್ತಿದ್ದರೂ ದುಬಾರಿ ಬಿಲ್ ನೀಡಿ ಹಣ ಕಟ್ಟುವಂತೆ ಒತ್ತಾಯಿಸುತ್ತಿರುವುದು ಸರಿಯಲ್ಲ ದುಬಾರಿ ಬಿಲ್ ನೀಡುತ್ತಿರುವುದರಿಂದ ಹಲವು ಸಂಶಯ ಮೂಡುತ್ತಿದ್ದು ತನಿಖೆ ಮಾಡಬೇಕೆಂದು ಒತ್ತಾಯಿಸಿದ ಅವರು ಚೆಸ್ಕಾಂ ಇಲಾಖೆಯ ದುಬಾರಿ ಹಣ ವಸೂಲಾತಿ ಧೋರಣೆಯಿಂದ ರೈತರು, ಬೆಳೆಗಾರರು ,ಕಾರ್ಮಿಕರು, ಸಾರ್ವಜನಿಕರು ಹಲವು ಸಂಕಷ್ಟ ಎದುರಿಸುತ್ತಿದ್ದಾರೆ ಕೂಡಲೇ ಸರಿಪಡಿಸಬೇಕೆಂದರು .
ಜಿಲ್ಲಾ ಪಂಚಾಯಿತಿ ಸದಸ್ಯ ಮುಕೂಂಡ ವಿಜು ಸುಬ್ರಮಣಿ ಮಾತನಾಡಿ ಜಿಲ್ಲೆಯ ಜನತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಧಿಕಾರಿಗಳು ಇಚ್ಛಾಶಕ್ತಿ ಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕೆಂದು ಹೇಳಿದ ಅವರು ಚೆಸ್ಕಾಂ ಇಲಾಖೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿಗಳ ಎಡವಟ್ಟಿನಿಂದ ಅಧಿಕ ಮೊತ್ತದ ಬಿಲ್ ಬರುತ್ತಿದ್ದು ಕೂಡಲೇ ಪರಿಶೀಲಿಸಬೇಕೆಂದು ಹೇಳಿದರು. ಬಿದ್ದಂಡ ಸುರೇಶ್ ಮಾತನಾಡಿ ಪಾಲಿಬೆಟ್ಟದಲ್ಲಿ ಬಿಡಾಡಿ ಜಾನುವಾರುಗಳು ಹಾಗೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ.ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮುಂದಾಗಬೇಕೆಂದು ಹೇಳಿದರು .
ಮಾಳೇಟ್ಟಿರ ಕಾಳಪ್ಪ ಮಾತನಾಡಿ ಪಟ್ಟಣದಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದ್ದು ಇದರಿಂದ ಹಲವು ದುಷ್ಪರಿಣಾಮಗಳು ಬೀರುವ ಸಾಧ್ಯತೆಯಿದೆ ಪ್ಲಾಸ್ಟಿಕ್ ನಿಷೇಧ ಮಾಡಿ ಬಳಕೆ ಮಾಡುವವರ ಮೇಲೆ ಹೆಚ್ಚು ದಂಡ ವಸೂಲಿ ಮಾಡಬೇಕು ಹಾಗೂ ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ತುಳುಕುತ್ತಿದ್ದು ಶುಚಿತ್ವ ಕಾಪಾಡಬೇಕೆಂದರು.
ಚೆಸ್ಕಾಂ ಅಧಿಕಾರಿ ಸೋಮಶೇಖರ್ ಮಾತನಾಡಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಗಾಳಿಗೆ ಅಲ್ಲಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿ ಸಂಪರ್ಕ ಕಡಿತಗೊಂಡು ಸಮಸ್ಯೆ ಎದುರಾಗಿದೆ.ಸರಿಪಡಿಸುವ ನಿಟ್ಟಿನಲ್ಲಿ ಎಲ್ಲ ಭಾಗದ ಸಿಬ್ಬಂದಿಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ.ಪಾಲಿಬೆಟ್ಟ ವ್ಯಾಪ್ತಿಯಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿರುವ ಹಿನ್ನೆಲೆಯಲ್ಲಿ ಗೋಣಿಕೊಪ್ಪದಿಂದ ಪಾಲಿಬೆಟ್ಟಕ್ಕೆ ಎಕ್ಸ್‌ಪ್ರೆಸ್ ಲೈನ್ ಕಾರ್ಯ ಸದ್ಯದಲ್ಲೇ ನಡೆಯಲಿದೆ . ಪಾಲಿಬೆಟ್ಟದಲ್ಲಿ ಸಭ್ ಸ್ಟೇಷನ್ ನಿರ್ಮಾಣಕ್ಕೆ ಜಾಗದ ಸಮಸ್ಯೆ ಎದುರಾಗಿತ್ತು ಈಗಾಗಲೇ ಟಾಟಾ ಕಾಫಿಯಿಂದ ಎರಡು ಎಕರೆ ಜಾಗವನ್ನು ನಿಗದಿ ಮಾಡಿದ್ದಾರೆ ಜಿಲ್ಲಾಧಿಕಾರಿಗಳ ಮೂಲಕ ಸಮಸ್ಯೆ ಬಗೆಹರಿಯಲಿದೆ ಎಂದರು.
ದೂರ ಸಂಪರ್ಕ ಇಲಾಖೆ ಅಧಿಕಾರಿ ಪೊನ್ನುರಾಜ್ ಮಾತನಾಡಿ ಹಲವೆಡೆ ಮೊಬೈಲ್ ನೆಟ್ವರ್ಕ್ ಸಂಪರ್ಕ ಸಮಸ್ಯೆ ಎದುರಾಗಿದೆ. ಬಳಕೆದಾರರು ಹೆಚ್ಚಾಗುವ ಸಂದರ್ಭದಲ್ಲಿ ಸಮಸ್ಯೆ ಕಂಡು ಬರುತ್ತಿದ್ದು ಈಗಾಗಲೇ ಹಲವೆಡೆ ಅಪ್ ಗ್ರೇಡ್ ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ ಎಂದರು .ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ .ಬೆಳೆಗಾರರ ಒಕ್ಕೂಟದ ಕಾರ್ಯದರ್ಶಿ ಎಂ. ಎಸ್ ಟವಿ ಲಯನ್ಸ್ ಕ್ಲಬ್ ಅಧ್ಯಕ್ಷ ಅನಂತರಾಮ್, ಚೆಸ್ಕಾಂ ಅಧಿಕಾರಿಗಳಾದ ಸುರೇಶ್ ,ಅಂಕಯ್ಯ, ಟಾಟಾ ಸಂಸ್ಥೆಯ ಅಧಿಕಾರಿ ಸತೀಶ್ ಬೆಳೆಗಾರರಾದ ಬಿದ್ದಂಡ ಗಣಪತಿ ,ವಾಸು ಮಂದಣ್ಣ ,ಕುಟ್ಟಂಡ ಮದನ್ ,ಎಸ್. ಪಿ ನಂದ,ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು
No comments
Post a Comment