ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ನಿಧನ
ರಾಜ್ಯ ಸುದ್ದಿ (Times Of Coorg) : ಖ್ಯಾತ ಗಾಯಕ ಗಾನ ಗಂಧರ್ವ ಎಸ್.ಪಿ ಬಾಲಸುಬ್ರಮಣ್ಯಂ ಇಂದು ಶುಕ್ರವಾರ ನಿಧನರಾಗಿದ್ದಾರೆ. ಕಳೆದ ೫೧ ದಿನಗಳಿಂದ ಬಾಲಸುಬ್ರಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕು ಧೃಡಪಟ್ಟ ಅವರನ್ನು ಆಗಸ್ಟ್ ೧೩ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

No comments
Post a Comment