ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಮಡಿಕೇರಿ (TIMES OF COORG):-ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ತರಬೇತಿ ಸಂಸ್ಥೆಯು 6 ತಿಂಗಳ ಅವಧಿಯ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ರೂ.400 ಶಿಷ್ಯವೇತನ ಮತ್ತು ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 05 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಅಬ್ಭಿಪಾಲ್ಸ್ ರಸ್ತೆ, ಮುತ್ತಪ್ಪ ದೇವಸ್ಥಾನ ಹತ್ತಿರ, ಮಡಿಕೇರಿ, ದೂರವಾಣಿ ಸಂಖ್ಯೆ: 08272-228437 / 9845318364/ 9535250704/ 9449245024/ 8762110952/ 9482890569/ 8762925862 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್‍ನ ಪ್ರಾಂಶುಪಾಲರು ತಿಳಿಸಿದ್ದಾರೆ.

No comments
Post a Comment