ಹವಾಮಾನ ಮುನ್ಸೂಚನೆ : ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ

No comments

      ಮಡಿಕೇರಿ (Times Of Coorg):-ಕೊಡಗು ಜಿಲ್ಲೆ ಸೇರಿದಂತೆ ಮಲೆನಾಡು ಭಾಗಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಸಾಧಾರಣದಿಂದ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ಸೆಪ್ಟೆಂಬರ್, 21 ರ ಬೆಳಗ್ಗೆ 8.30 ಗಂಟೆಯವರೆಗೆ ರೆಡ್ ಅಲರ್ಟ್ ಮತ್ತು ಸೆಪ್ಟೆಂಬರ್, 21 ರ ಬೆಳಗ್ಗೆಯಿಂದ ಸೆ.22 ರ ಬೆಳಗ್ಗೆ ವರೆಗೆ ಆರಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ. 

       ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂ.08272-221077, ವಾಟ್ಸ್‍ಆಪ್ ನಂ.8550001077 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ.

No comments

Post a Comment