ನಾಳೆ ನಾಪೋಕ್ಲು ರಾಫೆಲ್ಸ್ ಪಿಯು ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ
ಮಡಿಕೇರಿ (Times Of Coorg): ನಾಪೋಕ್ಲುವಿನ ರಾಫೆಲ್ಸ್ ಇಂಟರ್ನ್ಯಾಷನಲ್ ಇಂಗ್ಲಿಷ್ ಸ್ಕೂಲ್ ಮತ್ತು ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ, ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು, ಕಾಲೇಜಿನ ಉಪನ್ಯಾಸಕರಿಗೆ ನಾಳೆ (ಸೆಪ್ಟೆಂಬರ್ 15) ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗಳೂ ಆದ ನೂರುನ್ನೀಸ, ನಾಪೋಕ್ಲು ಆಸ್ಪತ್ರೆಯ ಆಡಳಿತಾಧಿಕಾರಿ
ಮೂಳೆತಜ್ಞ ಡಾ ರೋಹನ್ ಪೂವಯ್ಯ, ಹಾಗೂ ನಾಪೋಕ್ಲು ಠಾಣಾಧಿಕಾರಿ ಕಿರಣ್ ಆರ್ ಹಾಗೂ ಇನ್ನಿತರ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ

No comments
Post a Comment