ಸಿದ್ದಾಪುರ ಉಸ್ಮಾನ್ ಹಾಜಿ ಇನ್ನಿಲ್ಲ.
ಸಿದ್ದಾಪುರ,: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಸಮಾಜ ಸೇವಕ ಸಿದ್ದಾಪುರ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ. ಉಸ್ಮಾನ್ ಹಾಜಿ (80) ನಿಧನರಾಗಿದ್ದಾರೆ.ಸೋಮವಾರ ಸಂಜೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ ಹಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿರುವ ಇವರು, ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷ ಮತ್ತು ಡಿಸಿಸಿ ಉಪಾಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದರು. ಹಾಲಿ ಡಿಸಿಸಿ ಸಮಿತಿಯ ವಿಶೇಷ ಆಹ್ವಾನಿತರಾಗಿದ್ದಾರೆ. ಕಳೆದ 36 ವರ್ಷಗಳಿಂದ ಸಿದ್ದಾಪುರ ಮುಸ್ಲಿಂ ಜಮಾಅತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು, ಹಲವು ಧಾರ್ಮಿಕ ಹಾಗೂ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಏಳು ಗಂಡು, ನಾಲ್ಕು ಹೆಣ್ಣು ಮಕ್ಕಳನ್ನು ಹಾಗೂ ಪತ್ನಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸಂತಾಪ: ಉಸ್ಮಾನ್ ಹಾಜಿ ಅವರ ನಿಧನ ಕ್ಕೆ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ, ಡಿಸಿಸಿ ಅಧ್ಯಕ್ಷ ಕೆ.ಕೆ ಮಂಜುನಾಥ್,ಕಾಂಗ್ರೆಸ್ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಡಾ ಪಿ.ಸಿ ಹಸೈನಾರ್ ಹಾಜಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ ಗಣೇಶ್, ಎಸ್.ಡಿ.ಪಿ.ಐ ಪಕ್ಷದ ಅಮೀನ್ ಮೊಹಿಸಿನ್, ಎಸ್.ಎನ್.ಡಿ.ಪಿ ಜಿಲ್ಲಾಧ್ಯಕ್ಷ ವಿ.ಕೆ ಲೋಕೇಶ್, ಕಾಂಗ್ರೆಸ್ ಮುಖಂಡ ವಿ.ಪಿ ಶಶಿಧರ್, ಟಿ.ಪಿ ರಮೇಶ್, ಎಂ.ಎಸ್ ವೆಂಕಟೇಶ್, ಪಿ.ಎಫ್.ಐ ಹ್ಯಾರಿಸ್, ಸಿಪಿಎಂ ಪಕ್ಷದ ಮುಖಂಡ ಪಿ.ಆರ್ ಭರತ್ ,ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೆ.ಕೆ ಶ್ರೀನಿವಾಸ್ , ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮಜೀದ್ ಚೌಕಂಡಹಳ್ಳಿ. ಮತ್ತಿತರರು ಸಂತಾಪ ಸೂಚಿಸಿದರು.
No comments
Post a Comment