ಹೋಂಸ್ಟೆಗಳ ನೋಂದಣಿ ಸಂಬಂಧ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಸ್ಪಷ್ಟನೆ
ಮಡಿಕೇರಿ (Times Of Coorg):-ಹೋಂಸ್ಟೇಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 935 ಹೋಂ ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿಯಾಗಿದ್ದು, ಈಗಾಗಲೇ 480 ಹೋಂಸ್ಟೇಗಳಿಗೆ ಅನುಮೋದನೆ ನೀಡಲಾಗಿದೆ. ಉಳಿದ 397 ಹೋಂಸ್ಟೇಗಳನ್ನು ಪರಿಶೀಲಿಸಿ ವರದಿ ನೀಡುವಂತೆ ಹೋಬಳಿ ಮಟ್ಟದಲ್ಲಿ ಉಪ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದು, ಈಗಾಗಲೇ ಇಲಾಖೆಯಿಂದ ಅನುಮೋದನೆ ಪತ್ರ ಪಡೆದಿರುವವರಿಗೆ ಇದು ಅನ್ವಯಿಸುವುದಿಲ್ಲ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಅವರು ಸ್ಪಷ್ಟಪಡಿಸಿದ್ದಾರೆ.

No comments
Post a Comment