ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಮಡಿಕೇರಿ (Times Of Coorg):-ಜಿಲ್ಲಾಡಳಿತ , ಪ್ರವಾಸೋದ್ಯಮ ಇಲಾಖೆ ಹಾಗೂ ಕೊಡಗು ಜಿಲ್ಲಾ ಪ್ರವಾಸೋದ್ಯಮ ಪಾಲುದಾರರು ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಮತ್ತು ಸ್ವಚ್ಛತಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ೨೦೨೦ ರ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಧ್ಯೇಯ ವಾಕ್ಯವಾದ "ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ" ಎಂಬ ಭಿತ್ತಿಪತ್ರ ಬಿಡುಗಡೆ ಮಾಡುವ ಮೂಲಕ ಆಚರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಆಚರಿಸಲಾಯಿತು.
ಇದರೊಂದಿಗೆ ಕುಶಾಲನಗರದ ನಿಸರ್ಗಧಾಮ ಟೂರಿಸ್ಟ್ ಸೆಂಟರ್ (ಎನ್.ಟಿ.ಸಿ) ವತಿಯಿಂದ ನಿಸರ್ಗಧಾಮ ಪ್ರವಾಸಿ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ, ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕರಾದ ಚೇತನ್ ವಿ., ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಪ್ರಧಾನ ಕಾರ್ಯದರ್ಶಿ ಮತ್ತು ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್ ನ ಜಂಟಿ ಕಾರ್ಯದರ್ಶಿ ನವೀನ್ ಅಂಬೆಕಲ್, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನ ಸಂಘಟನಾ ಕಾರ್ಯದರ್ಶಿ ಮೋಂತಿ ಗಣೇಶ್, ಕೂರ್ಗ್ ಹೋಂಸ್ಟೇ ಅಸೋಸಿಯೇಷನ್ ನ ನಿರ್ದೇಶಕರಾದ ಶಶಿ ಮೊಣ್ಣಪ್ಪ, ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಅಸೋಸಿಯೇಷನ್ ನ ಉಪಾಧ್ಯಕ್ಷರಾದ ಜಹೀರ್ ಅಹಮ್ಮದ್ ಎಂ.ಬಿ ಇತರರು ಇದ್ದರು.

No comments
Post a Comment