ರಾಷ್ಟ್ರೀಯ ಸುದ್ದಿ (Times Of Coorg) : ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ (65) ಇಂದು ಬುಧವಾರ 23/ಸೆಪ್ಟೆಂಬರ್/2020ರಂದು ಸಂಜೆ ನಿಧನ ಹೊಂದಿದ್ದಾರೆ. ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗಾವಿ ಸಂಸದರಾಗಿದ್ದರು. 2004ರಲ್ಲಿ ಪ್ರಥಮ ಬಾರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಗೊಂಡಿದ್ದರು. 4 ಬಾರಿ ಸಂಸದರಾಗಿ ಆಯ್ಕೆಗೊಂಡಿದ್ದು, ಇವರು ಸದ್ಯ ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವರಾಗಿದ್ದರು.

No comments
Post a Comment