ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 104 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
74 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 30 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 29 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 15 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 48 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 43 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 5 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 24 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 10 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3363 ಆಗಿದ್ದು, 2627 ಮಂದಿ ಗುಣಮುಖರಾಗಿದ್ದಾರೆ. 736 ಸಕ್ರಿಯ ಪ್ರಕರಣಗಳಿದ್ದು, 49 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 549 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
No comments
Post a Comment