ಕೊಡಗು ಜಿಲ್ಲೆಯಲ್ಲಿ ಸೋಮವಾರ 108 ಮಂದಿಗೆ ಕೊರೋನಾ ಪಾಸಿಟಿವ್

No comments

 


ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 108 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. 

88 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 20 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 31 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 18 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 13 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಸೋಮವಾರಪೇಟೆ ತಾಲೂಕಿನಲ್ಲಿ 52 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 46  ಆರ್.ಟಿ.ಪಿ.ಸಿ.ಆರ್ ಮತ್ತು 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ವಿರಾಜಪೇಟೆ ತಾಲೂಕಿನಲ್ಲಿ 19 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 19 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.

ಹೊರ ಜಿಲ್ಲೆಯವರ ಪೈಕಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಆರ್.ಟಿ.ಪಿ.ಸಿ.ಆರ್ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3862 ಆಗಿದ್ದು, 3170 ಮಂದಿ ಗುಣಮುಖರಾಗಿದ್ದಾರೆ. 636 ಸಕ್ರಿಯ ಪ್ರಕರಣಗಳಿದ್ದು, 56 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 613 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment