ಕೊಡಗು ಜಿಲ್ಲೆಯಲ್ಲಿ ಸೋಮವಾರ 48 ಮಂದಿಗೆ ಕೊರೋನಾ ಪಾಸಿಟಿವ್
ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 48 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಈ ಪೈಕಿ 17 ಪ್ರಕರಣಗಳು ಆರ್‍ಟಿಪಿಸಿಆರ್ ಮೂಲಕ ಹಾಗೂ 31 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 17 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಆರ್‍ಟಿಪಿಸಿಆರ್ ಮತ್ತು 13 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 21 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಆರ್‍ಟಿಪಿಸಿ ಆರ್ ಮೂಲಕ ಮತ್ತು 10 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಆರ್‍ಟಿಪಿಸಿಆರ್ ಮೂಲಕ ಮತ್ತು 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3163 ಆಗಿದ್ದು, 2493 ಮಂದಿ ಗುಣಮುಖರಾಗಿದ್ದಾರೆ. 622 ಸಕ್ರಿಯ ಪ್ರಕರಣಗಳಿದ್ದು, 48 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 475 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment