ಕೊಡಗು ಜಿಲ್ಲೆಯಲ್ಲಿ ಸೋಮವಾರ 57 ಮಂದಿಗೆ ಕೊರೋನಾ ಪಾಸಿಟಿವ್

No comments

 


      ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8 ಗಂಟೆ ವೇಳೆಗೆ 57  ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

      46 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 11 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

        ಮಡಿಕೇರಿ ತಾಲೂಕಿನಲ್ಲಿ 20 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮತ್ತು 9 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

       ಸೋಮವಾರಪೇಟೆ ತಾಲೂಕಿನಲ್ಲಿ 31 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 31 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.

         ವಿರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

         ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3754 ಆಗಿದ್ದು, 3094 ಮಂದಿ ಗುಣಮುಖರಾಗಿದ್ದಾರೆ. 606 ಸಕ್ರಿಯ ಪ್ರಕರಣಗಳಿದ್ದು, 54 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 606 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment