ಕೊಡಗು ಜಿಲ್ಲೆಯಲ್ಲಿ ಮಂಗಳವಾರ 96 ಮಂದಿಗೆ ಕೊರೋನಾ ಪಾಸಿಟಿವ್

No comments

       ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 96 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

       92 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 14 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 11 ಆರ್.ಟಿ.ಪಿ.ಸಿ.ಆರ್ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

       ಸೋಮವಾರಪೇಟೆ ತಾಲೂಕಿನಲ್ಲಿ 35 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 34 ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

       ವಿರಾಜಪೇಟೆ ತಾಲೂಕಿನಲ್ಲಿ 44 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 44 ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ದೃಢಪಟ್ಟಿದೆ.

       ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 3259 ಆಗಿದ್ದು, 2600 ಮಂದಿ ಗುಣಮುಖರಾಗಿದ್ದಾರೆ. 610 ಸಕ್ರಿಯ ಪ್ರಕರಣಗಳಿದ್ದು, 49 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 508 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment