ಆಲೂರು ಸಿದ್ಧಾಪುರದಲ್ಲಿ ಕೋವಿಡ್-19 ಸಂಬಂಧ ಜಾಗೃತಿ ಕಾರ್ಯಕ್ರಮ

No comments

ಮಡಿಕೇರಿ (Times Of Coorg):-ಕೋವಿಡ್-19 ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವು ಜಿಲ್ಲೆಯಾದ್ಯಂತ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ಬಗ್ಗೆ ಅರಿವು ಮೂಡಿಸುವ ಕಾರ್ಯ ಮತ್ತು ಕೋವಿಡ್ ಪ್ರತಿಜ್ಞೆ ಬೋಧಿಸಲಾಗುತ್ತಿದೆ. 

     ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಗುರುವಾರ ಜಿಲ್ಲೆಯ ಆಲೂರು ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು, ದಾದಿಯರು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತ್ತು ಸಾರ್ವಜನಿಕರಿಗೆ ಕೋವಿಡ್ ಪ್ರತಿಜ್ಞೆಯನ್ನು ಬೋಧಿಸಲಾಯಿತು.

No comments

Post a Comment