ಭಾಗಮಂಡಲ ತ್ರಿವೇಣಿ ಸಂಗಮದ ಮುಡಿ ಶೆಡ್ಡು ನೂತನ ಕಟ್ಟಡ ಉದ್ಘಾಟಸಿದ ಸಚಿವ ವಿ.ಸೋಮಣ್ಣ

No comments
      ಮಡಿಕೇರಿ (Times Of Coorg) :-ಭಾಗಮಂಡಲ ತ್ರಿವೇಣಿ ಸಂಗಮದ ಬಳಿ ನೂತನವಾಗಿ ನಿರ್ಮಿಸಿರುವ ಮುಡಿ ಶೆಡ್ಡು, ಪಿಂಡ ಪ್ರದಾನ, ಶ್ರದ್ಧಾ ಮತ್ತು ಹೋಮ ಕಟ್ಟಡವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶುಕ್ರವಾರ ಉದ್ಘಾಟಿಸಿದರು.

       ಬಳಿಕ  ತಲಕಾವೇರಿಗೆ ಭೇಟಿ ನೀಡಿ ತಾಯಿ ಕಾವೇರಿ ಮಾತೆಗೆ ಸಚಿವ ವಿ.ಸೋಮಣ್ಣ ಅವರು ವಿಶೇಷ ಪೂಜೆ ಸಲ್ಲಿಸಿದರು.  ಈ ಸಂದರ್ಭ ವಿರಾಜಪೇಟೆ ಶಾಸಕರಾದ ಕೆ.ಜಿ ಬೋಪಯ್ಯ, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕವಿತಾ ಪ್ರಭಾಕರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಯಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರರಾದ ಮಹೇಶ್,  ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಮ್ಮಯ್ಯ, ತಕ್ಕ ಮುಖ್ಯಸ್ಥರಾದ ಕೋಡಿ ಮೋಡಯ್ಯ ಇತರರು ಇದ್ದರು.

No comments

Post a Comment