ಅಮ್ಮತ್ತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

No comments
      ಅಮ್ಮತ್ತಿ Times Of Coorg:- ಅಮ್ಮತ್ತಿಯ ಪಾಲಿಬೆಟ್ಟ ರಸ್ತೆಯಲ್ಲಿರುವ ಬಸ್ ತಂಗುದಾಣದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆಯಾಗಿದೆ.
ಕಳೆದೆರಡು ದಿನಗಳಿಂದ ತಂಗುದಾಣದಲ್ಲಿ ಮದ್ಯಪಾನ ಮಾಡುತ್ತ ಕುಳಿತಿದ್ದು , ಇಂದು ಬೆಳಿಗ್ಗೆ ಸುಮಾರು ಹತ್ತು ಗಂಟೆಗೆ ಸತ್ತಿರುತ್ತಾನೆ ಎನ್ನಲಾಗಿದೆ.
ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಸಬ್ ಇನ್ಸ್ಪೆಕ್ಟರ್ ವೀಣಾ ನಾಯಕ್ ಅವರು ಭೇಟಿ ನೀಡಿ ಮುಂದಿನ ಕ್ರಮ ಜರುಗಿಸಿದ್ದಾರೆ.
ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಶವ ಇರಿಸಲಾಗಿದೆ.

No comments

Post a Comment