ಗಾಂಧಿ ಜಯಂತಿ ಪ್ರಯುಕ್ತ ಅಂಬೇಡ್ಕರ್ ಜನಪರ ವೇದಿಕೆ ವತಿಯಿಂದ ಕುಶಾಲನಗರ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಕುಶಾಲನಗರ (Times Of Coorg) : ಗಾಂಧಿ ಜಯಂತಿ ಪ್ರಯುಕ್ತ ಅಂಬೇಡ್ಕರ್ ಜನಪರ ವೇದಿಕೆ ವತಿಯಿಂದ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ಒಳರೋಗಿಗಳಿಗೆ ಹಣ್ಣು ಹಂಪಲು ಹಾಗೂ ಊಟ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಹಣ್ಣು-ಹಂಪಲು ನೀಡುವ ಮೂಲಕ ಕಾಂಗ್ರೆಸ್ ಮುಖಂಡ ಜೋಸೆಫ್ ವಿಕ್ಟರ್ ಸೋನ್ಸ್ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಇಂದು ನಮ್ಮ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುಟ್ಟುಹಬ್ಬ ಇಂತಹ ಸಂದರ್ಭದಲ್ಲಿ ಅಂಬೇಡ್ಕರ್ ಜನಪರ ವೇದಿಕೆ ಸಂಘಟನೆ ಆಸ್ಪತ್ರೆಯ ಬಡ ಒಳರೋಗಿಗಳಿಗೆ ಊಟ ಮತ್ತು ಹಣ್ಣು-ಹಂಪಲು ವಿತರಣೆ ಮಾಡುತ್ತಿರುವುದು ಒಳ್ಳೆಯ ಕೆಲಸ ಮುಂದೆಯೂ ಸಹ ಸಂಘಟನೆ ವತಿಯಿಂದ ಸಮಾಜಮುಖಿ ಕೆಲಸಗಳು ಆಗಲಿ ಎಂದು ಹಾರೈಸಿದರು.
ಬಳಿಕ ಮಾತನಾಡಿದ ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾ ಕಾರ್ಯದರ್ಶಿಯಾದ ಝೈನುಲ್ ಅಬಿದ್.ಕೆ.ಎ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಗಾಂಧೀಜಿಯವರ ತತ್ವ-ಆದರ್ಶಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಅವರಿಗೆ ನಮನ ಸಲ್ಲಿಸಬೇಕಾಗಿದೆ. ಇಂದು ಅಂಬೇಡ್ಕರ್ ಜನಪರ ವೇದಿಕೆಯಿಂದ ಗಾಂಧೀಜಿಯವರನ್ನು ನೆನಪಿಸುವ ಕೆಲಸವನ್ನು ಬಡವರ ರೋಗಿಗಳ ಜೊತೆಗೂಡಿ ಮಾಡುತ್ತಿದ್ದೇವೆ ಎಂದರು. ಈ ಸಂದರ್ಭ ಅಂಬೇಡ್ಕರ್ ಜನಪರ ವೇದಿಕೆ ಜಿಲ್ಲಾಧ್ಯಕ್ಷ ಜಯಪ್ರಕಾಶ್, ಮಹಿಳಾ ಜಿಲ್ಲಾಧ್ಯಕ್ಷೆ ಫಾತಿಮಾ, ಪ್ರಮುಖರಾದ ಶಹನಾಜ್ ಬೇಗಂ, ಕಲ್ಪನಾ, ಮಹದೇವ, ಗೋಪಾಲ, ಮುಂತಾದವರು ಹಾಜರಿದ್ದರು.

No comments
Post a Comment