ಹತ್ರಾಸ್ ಸಾಮೂಹಿಕ ಅತ್ಯಾಚಾರ ಖಂಡಿಸಿ ಸಮಾನ ಮನಸ್ಕರ ವೇದಿಕೆ ವತಿಯಿಂದ ಸಿದ್ಧಾಪುರದಲ್ಲಿ ಪ್ರತಿಭಟನೆ

No comments

ಸಿದ್ದಾಪುರ (Times Of Coorg): ಉತ್ತರ ಪ್ರದೇಶದ ಹತ್ರಾಸ್ ನಲ್ಲಿ‌ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಮೃತದೇಹವನ್ನು ನೀಡದೆ ರಾತ್ರೋರಾತ್ರಿ ಸುಟ್ಟಾಕಿರುವ ಅಮಾನವೀಯ ಘಟನೆಯನ್ನು ಖಂಡಿಸಿ ಸಮಾನ ಮನಸ್ಕರ ವೇದಿಕೆ ವತಿಯಿಂದ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಪ್ರತಿಭಟನಾ ಸಭೆ ನಡೆಯಿತು.

ಮೇಣದ ಬತ್ತಿ ಪ್ರತಿಭಟನೆಯಲ್ಲಿ ಉತ್ತರ ಪ್ರದೇಶ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಸಂತ್ರಸ್ತೆಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯನ್ನು ತಡೆದು ಹಲ್ಲೆ ಮಾಡಿರುವುದಾಗಿ ಆರೋಪಿಸಿದ ಪ್ರತಿಭಟನಾಕಾರರು ಮಾಧ್ಯಮಗಳಿಗೂ ನಿರ್ಬಂಧ ಹೇರಿರುವ ಉತ್ತರಪ್ರದೇಶ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಮಾಅತೆ ಇಸ್ಲಾಮಿ ಸಂಘಟನೆಯ ಬಶೀರ್,
ಪತ್ರಕರ್ತ ರೆಜಿತ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಎ.ಎಸ್ ಮುಸ್ತಫ, ಸಿಪಿಐ ಪಕ್ಷದ ಕೃಷ್ಣ, ಪತ್ರಕರ್ತ ಎಂ.ಎ ಅಜೀಜ್ ಮಾತನಾಡಿದರು.

ಕಾಂಗ್ರೆಸ್ ಮುಖಂಡ ವಿ.ಕೆ ಬಶೀರ್, ಎಸ್ ಡಿ ಪಿ ಐ ಪಕ್ಷದ ಶೌಕತ್ ಅಲಿ, ಪ್ರಮುಖರಾದ ಹುಸೈನ್, ಕುಜ್ಞಾನ್, ಶೌಕತ್, ಅಸ್ಕರ್, ನವಾಸ್, ಹಸ್ಸನ್ ಸೇರಿದಂತೆ ಮತ್ತಿತರರು ಇದ್ದರು.


No comments

Post a Comment