ಸಿದ್ದಾಪುರ : ಹತ್ರಾಸ್ ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಸಿಐಟಿಯು ಹಮಾಲಿ ಕಾರ್ಮಿಕ ಸಂಘಟನೆಯ ಪ್ರಮುಖರು ಪ್ರತಿಭಟನೆ ನಡೆಸಿದರು.ಬಿಜೆಪಿ ಯೋಗಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು ಸಿಐಟಿಯು ಹಮಾಲಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಪಿ.ಆರ್ ಭರತ್ ಮಾತನಾಡಿ ಇಡೀ ವಿಶ್ವವೇ ತಲೆ ತಗ್ಗಿಸುವಂಥ ಕೆಲಸ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಅತ್ಯಾಚಾರ ಘಟನೆಯ ಹೊಣೆ ಹೊತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಕ್ಷಣ ರಾಜೀನಾಮೆ ನೀಡಬೇಕು. ಅತ್ಯಂತ ಅಮಾನುಷವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವ ಮೂಲಕ.ಆರೋಪಿಗಳ ಪರವಾಗಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು. ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷ ಮಹದೇವ್,ಸಿದ್ದಾಪುರ ಹಮಾಲಿ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಅಯ್ಯ,ಪ್ರಮುಖರಾದ ರಾಜೇಂದ್ರ, ಅರವಿಂದ್,ಸುರೇಶ್, ಪ್ರಶಾಂತ್,ಮಹೀಂದ್ರ, ಉಷಾ ಸೇರಿದಂತೆ ಮತ್ತಿತರರು ಇದ್ದರು
No comments
Post a Comment