ದಸರಾ ಅತ್ಯಂತ ಸರಳವಾಗಿ ಆಚರಿಸಿ: ಡಾ.ಸುಧಾಕರ್

No comments

      ಮಡಿಕೇರಿ (Times Of Coorg):-ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಕೋವಿಡ್-19 ಹಿನ್ನೆಲೆ ದಸರಾವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಆಡಂಬರ ಅಗತ್ಯವಿಲ್ಲ. ಜಿಲ್ಲೆಯಲ್ಲಿ ಆರೋಗ್ಯ ಮೂಲಭೂತ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಲಾಗುವುದು. ತಜ್ಞ ವೈದ್ಯರನ್ನು ನಿಯೋಜಿಸಲಾಗುವುದು. ಆಸ್ಪತ್ರೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗುವುದು.

       ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಿ ಕೋವಿಡ್ ಪ್ರಕರಣಗಳನ್ನು ಕಡಿಮೆ ಮಾಡಬೇಕು. ಮರಣ ಪ್ರಮಾಣ ಕಡಿಮೆ ಮಾಡಬೇಕು. ಕೋವಿಡ್ ನಿಯಂತ್ರಣ ಸಂಬಂಧ 144 ಸೆಕ್ಷನ್ ಜಾರಿ ಮಾಡುವ ನಿಟ್ಟಿನಲ್ಲಿ ಸಿಎಂ ಗಮನಕ್ಕೆ ತರಲಾಗುವುದು. ಹೋಂ ಐಸೋಲೇಷನ್‍ನಲ್ಲಿರುವವರನ್ನು ಗಮನಿಸಿಕೊಳ್ಳುವ ನಿಟ್ಟಿನಲ್ಲಿ ಇನ್ನಷ್ಟು ನಿಗಾವಹಿಸಬೇಕಿದೆ. ಪಾಸಿಟಿವ್ ಬಂದ ಸಂದರ್ಭದಲ್ಲಿ ಪ್ರತ್ಯೇಕವಾಗಿರಿಸುವಂತಾಗಬೇಕು. ಪಾಸಿಟಿವ್ ಬಂದ 48 ಗಂಟೆಯೊಳಗೆ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲು ಕ್ರಮ, ಐಸಿ ಕಾರ್ಯಕ್ರಮಗಳನ್ನು ಬಲಪಡಿಸಲು ಕ್ರಮ, ಮಾಸ್ಕ್ ಸರಿಯಾಗಿ ಧರಿಸದಿರುವವರಿಗೆ 500 ರೂ. ದಂಡ  ಎಂದರು.

No comments

Post a Comment