ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಭೇಟಿ : ಪರಿಶೀಲನೆ
ಮಡಿಕೇರಿ (Times Of Coorg):-ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ವಿದ್ಯಾರ್ಥಿಗಳು ಸಚಿವರನ್ನು ಭೇಟಿ ಮಾಡಿ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸೂಕ್ತ ಬಸ್ ವ್ಯವಸ್ಥೆ ಮತ್ತು ಆಟದ ಮೈದಾನವನ್ನು ಕಲ್ಪಿಸಿಕೊಡುವಂತೆ ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ಈ ಬಗ್ಗೆ ಕೆ.ಎಸ್.ಆರ್.ಟಿ.ಸಿ ಡಿಸಿ ಅವರೊಂದಿಗೆ ಮಾತನಾಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು. ಆಟದ ಮೈದಾನಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಜೊತೆಗೆ ವೈದ್ಯಕೀಯ ಕಾಲೇಜಿನ ನಿರ್ದೇಶಕರು, ಆಡಳಿತಾಧಿಕಾರಿಗಳು ಕಾಲೇಜಿನ ಆಡಳಿತವನ್ನು ಮತ್ತಷ್ಟು ಚುರುಕುಗೊಳಿಸಬೇಕಿದೆ ಎಂದು ಅವರು ಸಲಹೆ ನೀಡಿದರು.
ಶಾಸಕರಾದ ಅಪ್ಪಚ್ಚು ರಂಜನ್, ಕೊಡಗು ವೈದ್ಯಕೀಯ ಕಾಲೇಜು ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಆಡಳಿತಾಧಿಕಾರಿ ಡಾ.ನಂಜುಂಡೇಗೌಡ ಇತರರು ಇದ್ದರು.



No comments
Post a Comment