ಮಡಿಕೇರಿ (Times Of Coorg):-ನಿರ್ದೇಶಕರು(ಪ್ರೌಢ ಶಿಕ್ಷಣ) ಸಾ.ಶಿ.ಇ. ಬೆಂಗಳೂರು ಇವರ ನಿರ್ದೇಶನದಂತೆ ಕೋವಿಡ್-19 ಹಿನ್ನೆಲೆಯಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸಲು ಸಾಧ್ಯವಾಗಿರುವುದಿಲ್ಲ. ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಹಿತದೃಷ್ಠಿಯಿಂದ ಶಾಲೆಗಳಿಗೆ ಅಕ್ಟೋಬರ್, 12 ರಿಂದ ಅಕ್ಟೋಬರ್, 30 ರವರೆಗೆ ಮಧ್ಯಂತರ ರಜೆ ಘೋಷಿಸಿದ್ದು, ಆದ್ದರಿಂದ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಅಕ್ಟೋಬರ್, 30 ರವರೆಗೆ ಮಧ್ಯಂತರ ರಜೆ ಘೋಷಿಸಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.228337 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪೆರಿಗ್ರಿನ್ ಎಸ್.ಮಚ್ಚಾಡೋ ಅವರು ತಿಳಿಸಿದ್ದಾರೆ.

No comments
Post a Comment