ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಮಂಗಳವಾರ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.
11 ಪ್ರಕರಣಗಳು ಆರ್‍ಟಿಪಿಸಿಆರ್ ಮೂಲಕ ಹಾಗೂ 5 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 2 ಪ್ರಕರಣ ಆರ್‍ಟಿಪಿಸಿಆರ್ ಮೂಲಕ ಮತ್ತು 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಪ್ರಕರಣಗಳು ಆರ್‍ಟಿಪಿಸಿಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5092 ಆಗಿದ್ದು, 4866 ಮಂದಿ ಗುಣಮುಖರಾಗಿದ್ದಾರೆ. 157 ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 122 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment