ಮಡಿಕೇರಿ (Times Of Coorg):-ಜಿಲ್ಲೆಯಲ್ಲಿ ಶುಕ್ರವಾರ 22 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
19 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 3 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 15 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5144 ಆಗಿದ್ದು, 4935 ಮಂದಿ ಗುಣಮುಖರಾಗಿದ್ದಾರೆ. 139 ಸಕ್ರಿಯ ಪ್ರಕರಣಗಳಿದ್ದು, 70 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 118 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment