ಮಡಿಕೇರಿ ನ.11(Times Of Coorg):-ಜಿಲ್ಲೆಯಲ್ಲಿ ಬುಧವಾರ 22 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 16 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 6 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 3 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 12 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5114 ಆಗಿದ್ದು, 4873 ಮಂದಿ ಗುಣಮುಖರಾಗಿದ್ದಾರೆ. 172 ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 129 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment