ಮಡಿಕೇರಿ (Times of Coorg):-ಜಿಲ್ಲೆಯಲ್ಲಿ ಸೋಮವಾರ 24 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.
17 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 7 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿವೆ. ಈ ಪೈಕಿ 3 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.ವಿರಾಜಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5076 ಆಗಿದ್ದು, 4849 ಮಂದಿ ಗುಣಮುಖರಾಗಿದ್ದಾರೆ. 158 ಸಕ್ರಿಯ ಪ್ರಕರಣಗಳಿದ್ದು, 69 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 120 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment