ಸಿದ್ದಾಪುರ (Times Of Coorg.In) : ಬೆಳ್ಳಂಬೆಳಿಗ್ಗೆ ವಾಹನ ಚಲಾಯಿಸಿಕೊಂಡು ಮನೆ ಮನೆಗಳಲ್ಲಿ ತ್ಯಾಜ್ಯ ಸಂಗ್ರಹಿಸುವ ಮೂಲಕ ಪರಿಸರ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸಿ ಗ್ರಾಮಕ್ಕೆ ಮಾದರಿಯಾದ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಪಿಡಿಒ ರಾಜನ್ ಅವರ ಸೇವೆಗೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ವರ್ಷಗಳಿಂದ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಮುಕ್ತಿ ಕಾಣಿಸುವ ನಿಟ್ಟಿನಲ್ಲಿ ವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಿ ಮನೆಮನೆಗೆ ತ್ಯಾಜ್ಯ ಸಂಗ್ರಹಿಸಲು ಮುಂದಾಗಿರುವ ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿಯ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ . ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ,ಅಭಿವೃದ್ಧಿ ಅಧಿಕಾರಿ ರಾಜನ್ ಹಾಗೂ ಸದಸ್ಯರ ಕಾಳಜಿಯಿಂದ ತ್ಯಾಜ್ಯ ಮುಕ್ತ ಗ್ರಾಮವನ್ನಾಗಿಸಲು ಪಣತೊಟ್ಟಿದ್ದಾರೆ.2ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಮುಂದಾಗಿದೆ.ಸ್ವಚ್ಛ ಗ್ರಾಮ ಯೋಜನೆಯಡಿ ಜಿಲ್ಲಾ ಪಂಚಾಯ್ತಿ ಮೂಲಕ ವಾಹನ ಖರೀದಿಸಿ ಪೌರಕಾರ್ಮಿಕ ಸಿಬ್ಬಂದಿಗಳ ಕೊರತೆ ನಡುವೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜನ್. ಸದಸ್ಯರ ಸಹಕಾರದೊಂದಿಗೆ ಬೆಳಿಗ್ಗೆ ತ್ಯಾಜ್ಯ ಸಂಗ್ರಹ ವಾಹನದಲ್ಲಿ ಮನಮನೆಗೆ ತೆರಳಿ ತ್ಯಾಜ್ಯ ಸಂಗ್ರಹಕ್ಕೆ ಮುಂದಾಗಿದ್ದಾರೆ.ಎಲ್ಲೆಂದರಲ್ಲಿ ತ್ಯಾಜ್ಯ ಸುರಿಯದೆ ವಿಂಗಡನೆ ಮಾಡಿ ವಾಹನಕ್ಕೆ ನೀಡಬೇಕೆಂದು ಮನವಿ ಮಾಡಿದ ಅವರು ಸ್ವಚ್ಚ ಗ್ರಾಮವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕೆಂದು ಗ್ರಾಮದ ನಿವಾಸಿಗಳಿಗೆ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಪಂಚಾಯಿತಿ ಅಧ್ಯಕ್ಷೆ ಗೀತಾ ಮಾತನಾಡಿ ಕಳೆದ ಹಲವು ವರ್ಷಗಳಿಂದ ಸಮಸ್ಯೆಯಾಗಿದ್ದ ತ್ಯಾಜ್ಯ ವಿಲೇವಾರಿ ಇದೀಗ ಬಗೆಹರಿದಿದೆ.ಗ್ರಾಮದಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಜಾಗೃತಿ ಮೂಡಿಸಲಾಗಿದ್ದುಸುಂದರ ಗ್ರಾಮವನ್ನಾಗಿಸಲು ಮುಂದಾಗಿದೆ.ಚೆನ್ನಯ್ಯನಕೋಟೆ ಕೆರೆ ಆಸುಪಾಸಿನಲ್ಲಿದ್ದ ತ್ಯಾಜ್ಯವನ್ನು ತೆರವುಗೊಳಿಸಿ ಸುಂದರ ಉದ್ಯಾನವನವಾಗಿ ಮಾಡಲಾಗಿದ್ದು. ಗ್ರಾಮ ಶುಚಿಯಾಗಿಡಲು ಗ್ರಾಮಸ್ಥರು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ .ಮಹಿಳಾ ಸಂಘಟನೆಯ ಕಾರ್ಯಕರ್ತೆ ಇಂದಿರಾ ಮಾತನಾಡಿ ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿ ಅಭಿವೃದ್ಧಿ ಹಾಗೂ ಶುಚಿತ್ವಕ್ಕೆ ಆದ್ಯತೆ ನೀಡಿ ಗ್ರಾಮವನ್ನು ಸ್ವಚ್ಚವಾಗಿಡಲು ಮುಂದಾಗಿದೆ.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜನ್ತ್ಯಾಜ್ಯ ಸಂಗ್ರಹ ವಾಹನದಲ್ಲಿ ಮನೆ ಮನೆಗೆ ತೆರಳಿ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿಗೆ ಮುಂದಾಗಿರುವುದು ಶ್ಲಾಘನೀಯ ಪಂಚಾಯಿತಿಗೆ ಅಧಿಕಾರಿಯಾಗಿ ಬಂದ ಮೇಲೆ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಸುಂದರ ಪರಿಸರ ನಿರ್ಮಾಣ ಮಾಡಲು ಎಲ್ಲರು ಕೈಜೋಡಿಸಬೇಕೆಂದರು.ಈ ಸಂದರ್ಭ .ಪಂಚಾಯಿತಿ ಸದಸ್ಯರುಗಳು ಹಾಗೂ ಸ್ಥಳೀಯರು ಹಾಜರಿದ್ದರು.

No comments
Post a Comment