ಮಡಿಕೇರಿ (Times Of Coorg.in):-ಜಿಲ್ಲಾಡಳಿತದ ವತಿಯಿಂದ 65 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಸರಳವಾಗಿ ನಡೆಯಿತು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ನಾನಾ ಇಲಾಖೆ ಅಧಿಕಾರಿಗಳು ಇತರರು ಇದ್ದರು.
ಕಾರ್ಯಕ್ರಮದ ಬಳಿಕ ಮಾತನಾಡಿದ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕೋವಿಡ್-19 ಹಿನ್ನೆಲೆ ಸರಳ ಮತ್ತು ಸಾಂಪ್ರದಾಯಿಕವಾಗಿ ರಾಜ್ಯೋತ್ಸವ ಆಚರಿಸಲಾಗುತ್ತಿದೆ ಎಂದರು.

No comments
Post a Comment