ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

No comments

 ಮಡಿಕೇರಿ (Times Of Coorg):-ಪ್ರಸಕ್ತ(2020-21) ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಇಲಾಖಾ ವೆಬ್‍ಸೈಟ್ www.sw.kar.nic.inನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

      ಅರ್ಜಿ ಸಲ್ಲಿಸಲು ನವೆಂಬರ್, 21 ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಪ್ರತಿ ಸೆಮಿಸ್ಟರ್‍ನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಡಿಯಲ್ಲಿ 3 ವರ್ಷಗಳ ಪಾಲಿಟೆಕ್ನಿಕ್, ಡಿಪ್ಲೊಮಾ ಕೋರ್ಸುಗಳ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿರಬೇಕು. ಅರ್ಜಿಯೊಂದಿಗೆ ವ್ಯಾಸಂಗ ಮಾಡಿದ ಕಾಲೇಜುಗಳಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ ದೃಢೀಕರಣ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. 

      ಅರ್ಜಿಯನ್ನು ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ. 08272-225531, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಭಾರತಿ ಅವರು ತಿಳಿಸಿದ್ದಾರೆ.

No comments

Post a Comment