ಮಡಿಕೇರಿ :-ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 14 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
9 ಪ್ರಕರಣಗಳು ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 7 ಪ್ರಕರಣಗಳು ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 3 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5623 ಆಗಿದ್ದು, 5408 ಮಂದಿ ಗುಣಮುಖರಾಗಿದ್ದಾರೆ. 140
ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 68 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment