ಮಡಿಕೇರಿ :-ಜಿಲ್ಲೆಯಲ್ಲಿ ಶುಕ್ರವಾರ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
11 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 3 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 4 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5609 ಆಗಿದ್ದು, 5372 ಮಂದಿ ಗುಣಮುಖರಾಗಿದ್ದಾರೆ. 162 ಸಕ್ರಿಯ ಪ್ರಕರಣಗಳಿದ್ದು, 75 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 74 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments
Post a Comment