ಕೊಡಗು ಜಿಲ್ಲೆಯಲ್ಲಿ ಗುರುವಾರ 22 ಮಂದಿಗೆ ಕೊರೋನಾ ಪಾಸಿಟಿವ್

No comments

ಮಡಿಕೇರಿ :-ಜಿಲ್ಲೆಯಲ್ಲಿ ಗುರುವಾರ 22 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು  ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

19 ಪ್ರಕರಣಗಳು ಆರ್‍ಟಿಪಿಸಿಆರ್  ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಮಡಿಕೇರಿ ತಾಲೂಕಿನಲ್ಲಿ 15 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ ಈ ಪೈಕಿ 14 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 5 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5593 ಆಗಿದ್ದು, 5358 ಮಂದಿ ಗುಣಮುಖರಾಗಿದ್ದಾರೆ. 161 ಸಕ್ರಿಯ ಪ್ರಕರಣಗಳಿದ್ದು, 74 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 72 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment