ಜಿಲ್ಲೆಯಲ್ಲಿ ಬುಧವಾರ 24 ಮಂದಿಗೆ ಕೊರೋನಾ ಪಾಸಿಟಿವ್

No comments

ಮಡಿಕೇರಿ :-ಜಿಲ್ಲೆಯಲ್ಲಿ ಬುಧವಾರ 24 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್  ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

        19 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 5 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 6 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 3 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಸೋಮವಾರಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 7 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ಮತ್ತು 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.          ವಿರಾಜಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

       ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5571 ಆಗಿದ್ದು, 5344 ಮಂದಿ ಗುಣಮುಖರಾಗಿದ್ದಾರೆ. 153 ಸಕ್ರಿಯ ಪ್ರಕರಣಗಳಿದ್ದು, 74 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 74 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

No comments

Post a Comment